ಮೈಸೂರು: ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. ಮೈಸೂರು ಮಹಾರಾಜ ಕಾಲೇಜು ಆವರಣದಲ್ಲಿ ವೇದಿಕೆ ಸಿದ್ಧಗೊಂಡಿದ್ದು, ಒಂದು ಲಕ್ಷ ಜನ ಸೇರುವ ಸಾಧ್ಯತೆಯಿದೆ. ಕಾಂಗ್ರೆಸ್ ಸರ್ಕಾರ ನೂರು ದಿನ ಪೂರೈಸಿದ ಹಿನ್ನೆಲೆ ಎರಡೂ ಕಾರ್ಯಕ್ರಮಗಳನ್ನು ಒಟ್ಟಿಗೆ, ಒಂದೇ ವೇದಿಕೆಯಲ್ಲಿ
ರೂಪಿಸಿದೆ.ಇಂದಿನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೂ ಭಾಗಿಯಾಗಲಿದ್ದು, ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಯೋಜನೆಗೆ ಚಾಲನೆ ಸಿಗಲಿದೆ. ಇದೇ ಸಂದರ್ಭದಲ್ಲಿ ರಾಜ್ಯದಾದ್ಯಂತ ಕಾರ್ಯಕ್ರಮ ನಡೆಯಲಿದೆ. ಪ್ರತಿ ಗ್ರಾಮ ನಗರ ವ್ಯಾಪ್ತಿಯಲ್ಲಿ ಫಲಾನುಭವಿಗಳು ಭಾಗವಹಿಸಿ ಲೈವ್ ಮೂಲಕ ಕಾರ್ಯಕ್ರಮ ವೀಕ್ಷಿಸಲಿದ್ದಾರೆ. ಸಂವಾದ ನಡೆಯಲಿದೆ. ಸುಳ್ಯ ನಗರ ಹಾಗೂ ಗ್ರಾಮ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸುಳ್ಯ ನಗರ ಪಂಚಾಯತ್ನ ಕಾರ್ಯಕ್ರಮ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ.