ಅಹಮದಾಬಾದ್:ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 82 ರನ್ಗಳ ಸುಲಭ ಜಯ ದಾಖಲಿಸಿದ ಗುಜರಾತ್ ಟೈಟನ್ಸ್ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 168 ರನ್ ಗಳಿಸಿತು.ಗುರಿ ಬೆನ್ನಟ್ಟಿದ
ಹೈದ್ರಾಬಾದ್ ತಂಡ 14.5 ಓವರ್ಗಳಲ್ಲಿ 86 ರನ್ಗೆ ಆಲ್ ಔಟ್ ಆಯಿತು. ಎಸ್ಆರ್ಎಚ್ನ ಎಲ್ಲಾ ಬ್ಯಾಟರ್ಗಳು ವೈಫಲ್ಯ ಅನುಭವಿಸಿದರು. ಗುಜರಾತ್ ಪರ ಕಗೀಸೋ ರಬಾಡಾ, ಜಯ್ಸನ್ ಹೋಳ್ಡರ್ ತಲಾ ಮೂರು ವಿಕೆಟ್, ಪ್ರಸಿದ್ಧ್ ಕೃಷ್ಣ 2 ವಿಕೆಟ್ ಪಡೆದರು.
ಮೊದಲು ಬ್ಯಾಟ್ ಮಾಡಿದ ಗುಜರಾತ್ ಪರ ಸಾಯಿ ಸುದರ್ಶನ್ 44 ಎಸೆತಗಳಲ್ಲಿ 5 ಬೌಂಡರಿ, 2 ಸಿಕ್ಸರ್ ಸಹಿತ 61 ರನ್ ಗಳಿಸಿದರೆ, ವಾಷಿಂಗ್ಟನ್ ಸುಂದರ್ 33 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸರ್ ಸಹಿತ 50 ರನ್ ಗಮನ ಸೆಳೆದರು. ನಾಯಕ ಶುಭಮನ್ ಗಿಲ್, ಜೋಸ್ ಬಟ್ಲರ್ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.ಸನ್ರೈಸರ್ಸ್ ಹೈದರಾಬಾದ್ ಪರ ಪ್ರಫುಲ್ ಹಿಂಗೆ, ಸಕೀಬ್ ಹುಸೇನ್ ತಲಾ ಎರಡು ವಿಕೆಟ್ ಪಡೆದರೆ, ಪ್ಯಾಟ್ ಕಮಿನ್ಸ್ ಒಂದು ವಿಕೆಟ್ ಕಬಳಿಸಿದರು.













