ಬೆಂಗಳೂರು: ಐಪಿಎಲ್ನ ಕೊನೆಯ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್ಗಳ ಅಂತರದಿಂದ ಪರಾಭವಗೊಳಿಸಿದೆ.ಈ ಸೋಲಿನೊಂದಿಗೆ ಆರ್ಸಿಬಿಯ ಪ್ಲೇ-ಆಫ್ ಕನಸು ಭಗ್ನಗೊಂಡಿದೆ. ಮುಂಬೈ ಇಂಡಿಯನ್ಸ್ ಪ್ಲೇ-ಆಫ್ಗೆ ಲಗ್ಗೆ ಇಟ್ಟಿದೆ. ರವಿವಾರ ನಡೆದ ಪಂದ್ಯದಲ್ಲಿ ಗೆಲ್ಲಲು 198 ರನ್
ಗುರಿ ಬೆನ್ನಟ್ಟಿದ ಗುಜರಾತ್ 19.1 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದೆ. ಆರಂಭಿಕ ಬ್ಯಾಟರ್ ಶುಭಮನ್ ಗಿಲ್(ಔಟಾಗದೆ 104 ರನ್, 52 ಎಸೆತ, 5 ಬೌಂಡರಿ, 8 ಸಿಕ್ಸರ್)ಶತಕ ಹಾಗೂ ವಿಜಯ್ ಶಂಕರ್(53 ರನ್, 35 ಎಸೆತ, 7 ಬೌಂಡರಿ, 2 ಸಿಕ್ಸರ್) ಅರ್ಧಶತಕಗಳ ಕೊಡುಗೆ ನೀಡಿದರು.ಗಿಲ್ ಹಾಗೂ ಶಂಕರ್ 2ನೇ ವಿಕೆಟ್ ಜೊತೆಯಾಟದಲ್ಲಿ 123 ರನ್ ಜೊತೆಯಾಟ ನಡೆಸಿ ಭದ್ರ ಬುನಾದಿ ಹಾಕಿದರು. ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ಗೆ ಆಹ್ವಾನಿಸಲ್ಪಟ್ಟ ಆರ್ಸಿಬಿ ತಂಡ ಆರಂಭಿಕ ಬ್ಯಾಟರ್ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಗಳಿಸಿದ ಶತಕದ(ಔಟಾಗದೆ 101 ರನ್, 61 ಎಸೆತ, 13 ಬೌಂಡರಿ, 1 ಸಿಕ್ಸರ್)ಸಹಾಯದಿಂದ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ಗಳ ನಷ್ಟಕ್ಕೆ 197 ರನ್ ಗಳಿಸಲು ಶಕ್ತವಾಯಿತು. 14 ಪಂದ್ಯಗಳಿಂದ 7 ಗೆಲುವು ಮತ್ತು 7 ಸೋಲಿನಿಂದ 14 ಅಂಕ ಪಡೆದ ಆರ್ಸಿಬಿ ಪ್ಲೇಆಫ್ ಕಾಣದೆ ಟೂರ್ನಿಯಿಂದ ಹೊರ ಬಿತ್ತು. 14 ಪಂದ್ಯದಿಂದ 16 ಅಂಕ ಪಡೆದ ಮುಂಬೈ ಪ್ಲೇ ಆಫ್ ಪ್ರವೇಶಿಸಿತು.