ಸುಳ್ಯ:ರಾಜ್ಯ ಸರಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರಕಾರ ರಚಿಸಿದ ಗ್ಯಾರಂಟಿ ಅನುಷ್ಠಾನ ಸಮಿತಿಯ ದ.ಕ. ಜಿಲ್ಲಾ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಭರತ್ ಮುಂಡೋಡಿ ನೇಮಕಗೊಂಡಿದ್ದಾರೆ.ಸುಳ್ಯ ತಾಲೂಕು ಸಮಿತಿ ಅಧ್ಯಕ್ಷರಾಗಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ನೇಮಕಗೊಂಡಿದ್ದಾರೆ. ಜಿಲ್ಲಾ ಸಮಿತಿ ಸದಸ್ಯರಾಗಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಜಿತ್ ರೈ ಮೇನಾಲ ನೇಮಕಗೊಂಡಿದ್ದಾರೆ ಎಂದು ತಿಳಿದು ಬಂದಿದೆ.









