ಸುಳ್ಯ:ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನೆ ಆ.28ರಂದು ಬುಧವಾರ ಅಪರಾಹ್ನ 3 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ಕಚೇರಿಯ ಕಟ್ಟಡದಲ್ಲಿ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ
ಮಾಜಿ ಸಚಿವರಾದ ಬಿ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವಾನ್ ಡಿ ಸೋಜಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ಸುಳ್ಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ತಿಳಿಸಿದ್ದಾರೆ.