ಸುಳ್ಯ:ಸರಕಾರ ಅನುಷ್ಠಾನ ಮಾಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ.ಜಿಲ್ಲೆಯ ಪ್ರಚಾರ ಅಭಿಯಾನಕ್ಕೆ ಸುಳ್ಯದಲ್ಲಿ ನ.20ರಂದು ಚಾಲನೆ ನೀಡಲಾಯಿತು. ಸರಕಾರದ ವತಿಯಿಂದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಮೂಲಕ ನಡೆಯುತ್ತಿರುವ ಪ್ರಚಾರ ಅಭಿಯಾನ ಬೆಂಗಳೂರಿನಿಂದ ಹೊರಟು ಕೊಡಗು ಜಿಲ್ಲೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸಿತು. ಮುಂದಿನ 5 ದಿನಗಳ ಕಾಲ ಯಾತ್ರೆಯು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಯಾಣ ನಡೆಸಲಿದೆ.ಸುಳ್ಯದಲ್ಲಿ ಅಭಿಯಾನ ಯಾತ್ರೆಯನ್ನು ಸ್ವಾಗತಿಸಿ ದ.ಕ.ಜಿಲ್ಲಾ ಮಟ್ಟದ ಅಭಿಯಾನಕ್ಕೆ ಚಾಲನೆ ನೀಡಿದ ದ.ಕ.ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಮಾತನಾಡಿ ಸರಕಾರದ ಯೋಜನೆಗಳು ಜನರನ್ನು ತಲುಪಬೇಕು ಮತ್ತು ಅದರ ಮಾಹಿತಿ ಜನರಿಗೆ ಗೊತ್ತಾಗಬೇಕು ಎಂದು ಹೇಳಿದರು. ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಜನರಿಗೆ ಬದುಕು ಕೊಟ್ಟಿದೆ ಎಂದು ಅವರು ಹೇಳಿದರು.

ಸುಳ್ಯ ತಹಶೀಲ್ದಾರ್ ಎಂ.ಮಂಜುಳ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮಾತನಾಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಖಾದರ್ ಷಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ,ಸದಸ್ಯರಾದ ಸೋಮಶೇಖರ ಕೇವಳ, ಭವಾನಿಶಂಕರ ಕಲ್ಮಡ್ಕ, ಧನುಷ್ ಕುಕ್ಕೇಟ್ಟಿ, ಜ್ಞಾನಶೀಲನ್ ನೆಲ್ಲಿಕುಮೇರಿ, ಅಬ್ಬಾಸ್ ಅಡ್ಪಂಗಾಯ, ಪ್ರಮುಖರಾದ

ರಾಧಾಕೃಷ್ಣ ಬೊಳ್ಳೂರು, ಕೆ.ಗೋಕುಲ್ದಾಸ್, ಚೇತನ್ ಕಜೆಗದ್ದೆ,ರಾಜು ಪಂಡಿತ್, ಶಾಫಿ ಕುತ್ತಮೊಟ್ಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ, ಕ್ಷೇತ್ರ ಶಿಕ್ಷಣ ಸಂಯೋಜಕಿ ಧನಲಕ್ಷ್ಮಿ ಕುದ್ಪಾಜೆ, ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್ಸ್, ವಾರ್ತಾ ಇಲಾಖೆಯ ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಕಲಾವಿದರಾದ ಗುಂಡುರಾಜ್ ನೇತೃತ್ವದಲ್ಲಿ ಗ್ಯಾರಂಟಿ ಕಾರ್ಯಕ್ರಮಗಳ ಅರಿವು ನೀಡುವ, ಜಾಗೃತಿ ಮೂಡಿಸುವ ಬೀದಿ ನಾಟಕ, ಸಾಕ್ಷ್ಯ ಚಿತ್ರ ಪ್ರದರ್ಶನ, ಗೊಂಬೆಯಾಟ ಪ್ರದರ್ಶನಗೊಂಡಿತು.









