ಸುಳ್ಯ:ರಾಜ್ಯ ಸರಕಾರ ಅನುಷ್ಠಾನ ಮಾಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸುಳ್ಯ ತಾಲೂಕು ಮಟ್ಟದ ಬೃಹತ್ ಗ್ಯಾರಂಟಿ ಸಮಾವೇಶ ಮಾ.10ರಂದು ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಮಾವೇಶವನ್ನು ಉದ್ಘಾಟಿಸಿದರು. ವಿಧಾನಪರಿಷತ್ ಸದಸ್ಯರಾದ
ಕೆ.ಹರೀಶ್ ಕುಮಾರ್, ಮಂಜುನಾಥ ಭಂಡಾರಿ,ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್, ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಗದೀಶ್ ನಾಯಕ್, ತಹಶೀಲ್ದಾರ್ ಜಿ.ಮಂಜುನಾಥ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೆಚ್.ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಾವಿರಾರು ಮಂದಿ ಫಲಾನುಭವಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು.
ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ ಹೀಗೆ 5 ಗ್ಯಾರಂಟಿ ಯೋಜನೆಗಳ ಸುಳ್ಯ ತಾಲೂಕಿನ ಫಲಾನುಭವಿಗಳು ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಉದ್ಘಾಟನಾ ಸಮಾರಂಭದ ಬಳಿಕ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ನೀಡಿದರು.









