ಸುಳ್ಯ:ರಾಜ್ಯ ಸರಕಾರ ಅನುಷ್ಠಾನ ಮಾಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುತಿದೆ. ಸುಳ್ಯ ತಾಲೂಕು ಮಟ್ಟದ ಗ್ಯಾರಂಟಿ ಸಮಾವೇಶ ಮಾ.10ರಂದು ಪೂ.10ಕ್ಕೆ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ.ಕಾರ್ಯಕ್ರಮಕ್ಕೆ ಅದ್ದೂರಿ ಸಿದ್ಧತೆ ಮಾಡಿ ಕೊಳ್ಳಲಾಗುತಿದೆ. ತಾಲೂಕಿನ ವಿವಿಧ ಭಾಗಗಳಿಂದ ಸುಮಾರು
ಐದು ಸಾವಿರ ಮಂದಿ ಫಲಾನುಭವಿಗಳು ಭಾಹವಹಿಸುವ ನಿರೀಕ್ಷೆ ಇದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ಶಾಸಕರುಗಳು, ವಿಧಾನಪರಿಷತ್ ಸದಸ್ಯರು, ನಗರ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಸೇರಿ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ ಹೀಗೆ 5 ಗ್ಯಾರಂಟಿ ಯೋಜನೆಗಳ ಸುಳ್ಯ ತಾಲೂಕಿನ ಫಲಾನುಭವಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಉದ್ಘಾಟನಾ ಸಮಾರಂಭದ ಬಳಿಕ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ನೀಡಲಿದ್ದಾರೆ. ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯುವ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಗ್ರಾಮಗಳಿಂದ ಬಸ್ ವ್ಯವಸ್ಥೆ:
ಗ್ರಾಮ ಗ್ರಾಮಗಳಿಂದ ಫಲಾನುಭವಿಗಳನ್ನು ಕರೆ ತರಲು ಬಸ್ ವ್ಯವಸ್ಥೆ ಮಾಡಲಾಗಿದೆ. 25 ಗ್ರಾಮ ಪಂಚಾಯತ್ಗಳಿಂದ ಬಸ್ ವ್ಯವಸ್ಥೆಯ ಜೊತೆಗೆ ನಗರ ವ್ಯಾಪ್ತಿಯಲ್ಲಿ 3 ವ್ಯಾನ್, 3 ಜೀಪ್ ವ್ಯವಸ್ಥೆ ಮಾಡಲಾಗಿದೆ.

ತಹಶೀಲ್ದಾರ್ ಜಿ.ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಪ್ರಮುಖರು ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕಾಂಗ್ರೆಸ್ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಜಿ.ಕೃಷ್ಣಪ್ಪ,ಕಾಂಗ್ರೆಸ್ ಮುಖಂಡರಾದ ಭರತ್ ಮುಂಡೋಡಿ, ಎನ್.ಜಯಪ್ರಕಾಶ್ ರೈ,ರಾಧಾಕೃಷ್ಣ ಬೊಳ್ಳೂರು, ಎಂ.ವೆಂಕಪ್ಪ ಗೌಡ, ಕೆ.ಗೋಕುಲ್ದಾಸ್, ಪಿ.ಎಸ್.ಗಂಗಾಧರ, ಶರೀಫ್ ಕಂಠಿ, ಸಿದ್ದಿಕ್ ಕೊಕ್ಕೊ, ರಾಜು ಪಂಡಿತ್, ಸುರೇಶ್ ಅಮೈ, ಭವಾನಿಶಂಕರ ಕಲ್ಮಡ್ಕ, ಶಹೀದ್ ಪಾರೆ, ಸಲೀಂ ಪೆರುಂಗೋಡಿ, ತಾಲೂಕು ಆರೋಗ್ಯಾಧಿಕಾರಿ ನಂದಕುಮಾರ್, ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ, ಮೆಸ್ಕಾಂ ಎಇಇ ಹರೀಶ್ ನಾಯ್ಕ್, ಲೋಕೋಪಯೋಗಿ ಎಇಇ ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.














