ಮೈಸೂರು:ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು.ನಗರದ ಮಂಡಕಳ್ಳಿ ವಿಮಾನದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಗ್ಯಾರಂಟಿ ಯೋಜನೆಗಳು
ಮುಂದುವರೆಯುತ್ತವೆ. ಅದು ಬಡವರ ಕಾರ್ಯಕ್ರಮ, ಚುನಾವಣೆಗಾಗಿ ಮಾಡಿದ್ದಲ್ಲ, ಬಡವರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬಲು ಈ ಯೋಜನೆ ಜಾರಿಗೆ ತಂದಿರುವುದು. ಆದ್ದರಿಂದ ಅದನ್ನು ನಿಲ್ಲಿಸಲ್ಲʼ ಎಂದು ಹೇಳಿದರು.ಲೋಕಸಭಾ ಚುನಾವಣೆಯಲ್ಲಿ ನಮಗೆ ದೊಡ್ಡ ಮಟ್ಟದ ಹಿನ್ನಡೆಯಾಗಿಲ್ಲ, ಕಳೆದ ಬಾರಿ 1 ಸ್ಥಾನ ಗೆದ್ದಿದ್ದ ನಾವು ಈ ಬಾರಿ 9 ಸ್ಥಾನ ಗೆದ್ದಿದ್ದೇವೆ. ಆದರೆ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನ ಬಂದಿಲ್ಲ ಎಂದು ಹೇಳಿದರು.1 ರಿಂದ 9 ಸ್ಥಾನ ಗೆದ್ದಿದ್ದೇವೆ. ಈ ಬಾರಿ ಶೇ.13ರಷ್ಟು ಮತಗಳ ಹೆಚ್ಚಳವಾಗಿದೆ ಎಂದು ಹೇಳಿದರು