ಸುಳ್ಯ:ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ, ಪಟ್ಟಣ ಪಂಚಾಯತ್ ಸುಳ್ಯ ಇದರ ವತಿಯಿಂದ ಸುಳ್ಯ ನಗರ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ನೋಂದಾವಣೆಗೆ ಬಾಕಿ ಇರುವ ಹಾಗೂ ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಸುಳ್ಯ ನಗರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಉದ್ಘಾಟಿಸಿದರು. ಕರ್ನಾಟಕ ಸರಕಾರ ಘೋಷಿಸಿದ

ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಐಟಿ, ಜಿಎಸ್ಟಿ ಮತ್ತಿತರ ದಾಖಲೆ ಮತ್ತಿತರ ಕೆಲವು ತಾಂತ್ರಿಕ ಸಮಸ್ಯೆಗಳಿಂದ ಕೆಲವು ಜನರಿಗೆ ಗ್ಯಾರಂಟಿ ಯೋಜನೆಯ ಪ್ರಯೋಜನ ದೊರಕುತ್ತಿಲ್ಲ. ಇದು ರಾಜ್ಯಮಟ್ಟದಲ್ಲಿ ಇರುವ ಸಮಸ್ಯೆ. ಇದರ ಪರಿಹಾರಕ್ಕೆ ಪ್ರಾಮಾಣಿಕವಾದ ಪ್ರಯತ್ನ ನಡೆಯುತಿದೆ. ಮುಂದಿನ ದಿನಗಳಲ್ಲಿ ಅರ್ಹರಾದ ಎಲ್ಲರಿಗೂ ಗ್ಯಾರಂಟಿ ಯೋಜನೆಗಳು ದೊರಕಲಿದೆ ಅವರು ಎಂದು ಹೇಳಿದರು.
ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿ ಮಾತನಾಡಿ ‘ಕಳೆದ 18 ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಯಲ್ಲಿ ಸುಳ್ಯ ತಾಲೂಕಿಗೆ 183 ಕೋಟಿ ರೂ ಫಲಾನುಭವಿಗಳಿಗೆ ಬಂದಿದೆ ಎಂದು ಹೇಳಿದರು. ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ,
ನಗರ ಪಂಚಾಯತ್ ಸದಸ್ಯರಾದ ಎಂ.ವೆಂಕಪ್ಪ ಗೌಡ, ಶರೀಫ್ ಕಂಠಿ, ಧೀರಾ ಕ್ರಾಸ್ತಾ, ಸಿದ್ದಿಕ್ ಕೊಕ್ಕೊ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಭವಾನಿಶಂಕರ ಕಲ್ಮಡ್ಕ, ಜ್ಞಾನಶೀಲನ್ ನೆಲ್ಲಿಕುಮೇರಿ, ಲತೀಫ್ ಅಡ್ಕಾರ್, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ ದಿನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಧಿಕಾರಿಗಳು ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಯ ವಿವರ ನೀಡಿದರು.
ಬಳಿಕ ಫಲಾನಿಭವಿಗಳ ವಿವಿಧ ಅರ್ಜಿಗಳ ವಿಲೇವಾರಿ ನಡೆಯಿತು.