ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಡ್ರೈವ್ ನಡೆಸಿ ಸ್ಥಳೀಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ ಶಾಲೆ, ಕಾಲೇಜು ಗಳ ಸುತ್ತಮುತ್ತ ಇರುವ
ಗೂಡಂಗಡಿ, ಹೋಟೆಲ್ಗಳು, ಜೆರಾಕ್ಸ್ ಸೆಂಟರ್ ಗಳು, ಪಾನ್ ಶಾಪ್ ಗಳು, ಕಿರಾಣಿ ಅಂಗಡಿ ಮುಂತಾದ ಕಡೆ,ಏಕ ಕಾಲದಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಭೇಟಿ ನೀಡಿ ತಪಾಸಣೆ ನಡೆಸಿ ,ಕಾನೂನು ಬಾಹಿರವಾಗಿ ಗುಟ್ಕಾ, ಸಿಗರೇಟ್ ಮಾರಾಟ ಮಾಡುವವರ ಮೇಲೆ COTPA ಕಾಯ್ದೆ ಅಡಿ ಕ್ರಮ ಕೈಗೊಂಡು, ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಸದಂತೆ ಎಚ್ಚರಿಕೆಯನ್ನು ನೀಡಿದ್ದಾರೆ. ಶಾಲಾ, ಕಾಲೇಜು ಕಾನೂನು ಬಾಹಿರವಾಗಿ ಗುಟ್ಕಾ, ಸಿಗರೇಟ್ ಮಾರಾಟ ಮಾಡದಂತೆ ಸೂಚನೆ ನೀಡಲಾಯಿತು.