ಸುಳ್ಯ:ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭ ಫೆ.8ರಂದು ಆಯೋಜಿಸಲಾಗಿತ್ತು. ಆದರೆ ಕಾರ್ಯಕ್ರಮಕ್ಕೆ ಅತಿಥಿಗಳಾಗಿದ್ದ ಎಲ್ಲಾ ಜನಪ್ರತಿನಿಧಿಗಳು ಗೈರು ಹಾಜರಾಗಿದ್ದಾರೆ. ಸರಕಾರಿ ಶಾಲಾ ಕಾರ್ಯಕ್ರಮಕ್ಕೆ ಸಚಿವರು, ಶಾಸಕರು ಸೇರಿ ಎಲ್ಲಾ ಜನಪ್ರತಿನಿಧಿಗಳು ಗೈರು ಹಾಜರಾಗಿರುವುದಕ್ಕೆ ಸಂಘಟಕರು ಬೇಸರ ವ್ಯಕ್ತಪಡಿಸಿದರು.
ಉದ್ಘಾಟನಾ ಕಾರ್ಯಕ್ರಮದ
ಉದ್ಘಾಟಕರಾಗಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಅಧ್ಯಕ್ಷತೆ ವಹಿಸಬೇಕಾಗಿದ್ದ ಶಾಸಕಿ ಭಾಗೀರಥಿ ಮುರುಳ್ಯ, ಅತಿಥಿಗಳಾಗಿದ್ದ ಸಂಸದ ನಳಿನ್ ಕುಮಾರ್ ಕಟೀಲ್,ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್,ಎಸ್.ಎಲ್.ಭೋಜೇಗೌಡ, ಮಂಜುನಾಥ ಭಂಡಾರಿ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ.
ಸಮಾರಂಭದಲ್ಲಿ ಅತಿಥಿಗಳಾಗಿದ್ದ ಜನಪ್ರತಿನಿಧಿಗಳ ಗೈರು ಹಾಜರಾಗಿರುವುದಕ್ಕೆ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರು ಬೇಸರ ವ್ಯಕ್ತಪಡಿಸಿಸರು. ಜನಪ್ರತಿನಿಧಿಗಳು ಕಾರ್ಯಕ್ರಮಕ್ಕೆ ಬರುವುದಾಗಿ ಒಪ್ಪಿ ಆಮಂತ್ರಣದಲ್ಲಿ ಹೆಸರು ಹಾಕಿದ್ದೇವೆ. ಎರಡು ದಿನಗಳಿಂದ ನಿರಂತರ ಸಂಪರ್ಕದಲ್ಲಿ ಇದ್ದರೂ ಯಾರೊಬ್ಬ ಜನಪ್ರತಿನಿಧಿಗಳು ಬಾರದೇ ಇರುವುದು ಬೇಸರ ತಂದಿದೆ. ಜನಪ್ರತಿಗಳು ಜನರ ಒಟ್ಟಿಗೆ ಇರುವಂತವರು.. ಅವರು ಬರುತ್ತೇನೆ ಎಂದು ಒಪ್ಪಿ ಬಾರದೇ ಇರುವುದು ಸರಿಯಲ್ಲ, ಬರಲು ಆಗದಿದ್ದರೆ ಮೊದಲೇ ಹೇಳಬೇಕು, ಒಪ್ಪಿ ಬಾರದೇ ಇರುವುದು ಸರಿಯಾದ ಸಂಪ್ರದಾಯ ಅಲ್ಲ ಎಂದು ನಿತ್ಯಾನಂದ ಮುಂಡೋಡಿ ತಮ್ಮ ಭಾಷಣದಲ್ಲಿ ಹೇಳಿದರು.







