ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ಜಯಂತಿ ಕಾರ್ಯಕ್ರಮ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗುರುವಾರ ನಡೆಯಿತು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ
ವಿಶ್ವಕ್ಕೆ ಶಾಂತಿಯ, ಸೌಹಾರ್ಧತೆಯ ಸಂಕೇತವನ್ನು ಸಾರಿದ ವಿಶ್ವ ಮಾನವ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ ನಮಗೆಲ್ಲ ಮಾರ್ಗದರ್ಶನವಾಗಿದೆ ಎಂದು ಹೇಳಿದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಪ್ರಮುಖರಾದ ಕೃಷ್ಣ ಭಟ್ ದೊಡ್ಡತೋಟ, ರಾಜು ಪಂಡಿತ್, ರಂಜಿತ್ ರೈ ಮೇನಾಲ, ಬಾಲಕೃಷ್ಣ ಸಂಕೇಶ, ಸೌಕತ್ ಆಲಿ ಅಜ್ಜಾವರ, ಗಂಗಾಧರ ಮೇನಾಲ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.