ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗುರುವಪ್ಪ ಕಲ್ಲುಗುಡ್ಡೆ ಏ.20ರಂದು ನಾಮಪತ್ರ ಸಲ್ಲಿಸಿದರು. ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿನ ಚುನಾವಣಾಧಿಕಾರಿ ಕಚೇರಿಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿ ಅರುಣ್ಕುಮಾರ್ ಅವರಿಗೆ
ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಆನಂದ ಬೆಳ್ಳಾರೆ, ವಿಶ್ವನಾಥ ಅಲೆಕ್ಕಾಡಿ,ಶೀನ ಬಾಳಿಲ, ಕೆ.ಪಿ.ಆನಂದ, ವಸಂತ ಕುಬಲಾಡಿ ಮತ್ತಿತರರು ಉಪಸ್ಥಿತರಿದ್ದರು.
ದಲಿತ ಸಂಘರ್ಷ ಸಮಿತಿಯ ಸುಳ್ಯ ಹಾಗು ಕಡಬ ತಾಲೂಕು ಸಮನ್ವಯ ಸಮಿತಿಯ ಅಭ್ಯರ್ಥಿಯಾಗಿ ಗುರುವಪ್ಪ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆನಂದ ಬೆಳ್ಳಾರೆ ತಿಳಿಸಿದ್ದಾರೆ.