ಸುಳ್ಯ: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಇಂದು ಮಂಗಳೂರಿನಲ್ಲಿ ನಡೆದಿದ್ದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಮಗ್ರ ಜಯ ವ್ಯವಹಾರ ಪರಿಗಣಿಸಿ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ದೊರೆತಿದೆ.ಡಿಸಿಸಿ ಬ್ಯಾಂಕಿನ
ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು. ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ ಪ್ರಶಸ್ತಿ ಸ್ವೀಕರಿಸಿದರು. ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಅಂಬೆಕಲ್ಲು, ನಿರ್ದೇಶಕರುಗಳಾದ ಬೆಳ್ಯಪ್ಪ ಗೌಡ ಕಡ್ತಲ್ಕಜೆ, ಜಯಪ್ರಕಾಶ್ ಮೊಗ್ರ, ನವೀನ್ ಬಾಳುಗೋಡು ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಕುಮಾರ್ ಸಿ ಎಚ್ ಮತ್ತಿತರರು ಉಪಸ್ಥಿತರಿದ್ದರು.