ಸುಳ್ಯ:ಗುತ್ತಿಗಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಗೆ ಫೆ.23ರಂದು ಚುನಾವಣೆ ನಡೆಯಲಿದ್ದು ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ 12 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ
ಹಾಲಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಜಯಪ್ರಕಾಶ್ ಮೊಗ್ರ, ನವೀನ್ ಬಾಳುಗೋಡು, ರವೀಂದ್ರ ಕಾನಾವು ಅಡ್ಡನಪಾರೆ, ಪದ್ಮನಾಭ ಮೀನಾಜೆ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಕೃಷ್ಣಯ್ಯ ಮೂಲೆತೋಟ, ಹಿಂದುಳಿದ ಬಿ ಕ್ಷೇತ್ರದಿಂದ ವಿನ್ಯಾಸ್ ಕೊಚ್ಚಿ, ಮಹಿಳಾ ಕ್ಷೇತ್ರದಿಂದ ತಿಲಕ ಕೊಲ್ಯ, ವಿನುತಾ ಜಾಕೆ, ಪರಿಶಿಷ್ಟ ಪಂಗಡದಿಂದ ಜನಾರ್ದನ ನಾಯ್ಕ ಅಚ್ರಪ್ಪಾಡಿ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಕುಂಞ ಬಳ್ಳಕ್ಕ ನಾಮಪತ್ರ ಸಲ್ಲಿಸಿದರು. ಪಕ್ಷೇತರರಾಗಿ ಸಾಮಾನ್ಯ ಕ್ಷೇತ್ರಕ್ಕೆ ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸಿದ್ದಾರೆ.