ಸುಳ್ಯ:ಸುಳ್ಯ ಕಾಂತಮಂಗಲ ಕುರುಂಜಿಯ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ ಸಂಪನ್ನಗೊಂಡಿತು. ಕ್ಷೇತ್ರದಲ್ಲಿ ಜ.31 ರಂದು ಸಂಧ್ಯಾ ಕಾಲ ಗುತ್ಯಮ್ಮ ದೇವಿಗೆ ರಂಗಪೂಜಾ ಸೇವೆ ನೆರವೇರಿತು. ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ ಭಕ್ತಿ ಸಂಭ್ರಮದಿಂದ ನಡೆಯಿತು. ಗುತ್ಯಮ್ಮ ದೇವಿಗೆ ರಂಗ ಪೂಜೆ ನಡೆದು ಪ್ರಸಾದ ವಿತರಣೆ ನಡೆದು
ಕವಾಟ ಬಂಧನ ನಡೆಯಿತು. ಅನ್ನ ಸಂತರ್ಪಣೆಯೊಂದಿಗೆ
ಉತ್ಸವ ಸಂಪನ್ನಗೊಂಡಿತು. ಉತ್ಸವದ ಅಂಗವಾಗಿ ಜ.31 ರಂದು ಕ್ಷೇತ್ರದ ಗರ್ಭಗುಡಿ ತೆರೆದು ದಿನಪೂರ್ತಿ ವಿಶೇಷ ಪೂಜೆ, ಹೋಮ, ಹವನ ನೆರವೇರಿತು.ಡಾ.ರೇಣುಕಾಪ್ರಸಾದ್ ಕೆ.ವಿ. ಧರ್ಮದರ್ಶಿಗಳಾಗಿರುವ ಕ್ಷೇತ್ರದಲ್ಲಿ ವರ್ಷದಲ್ಲಿ ಒಂದು ದಿನ ಮಾತ್ರ ಗರ್ಭಗುಡಿಯ ಬಾಗಿಲು ತೆರೆಯುವುದು ವಿಶೇಷತೆ.

ಸಾವಿರಾರು ಮಂದಿ ಭಕ್ತರು ಆಗಮಿಸಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಉಪಾಧ್ಯಕ್ಷೆ ಶೋಭಾ ಚಿದಾನಂದ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ನೂರಾರು ಮಂದಿ ಪ್ರಮುಖರು ದರ್ಶನ ಪಡೆದರು. ನಿನ್ನೆ ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಡಾ.ಕೆ.ವಿ.ಚಿದಾನಂದ ಹಾಗೂ ಶೋಭಾ ಚಿದಾನಂದ ಅವರನ್ನು ಡಾ.ರೇಣುಕಾಪ್ರಸಾದ್ ಹಾಗೂ ಜ್ಯೋತಿ ಆರ್.ಪ್ರಸಾದ್ ಸೇರಿ ಸ್ವಾಗತಿಸಿ, ಆಶೀರ್ವಾದ ಪಡೆದರು. ಶುಕ್ರವಾರ ಬೆಳಿಗ್ಗೆ

ದೈವಜ್ಞರಾದ ಕಾರ್ಕಳ ಕೊಂಡೆಜಾಲು ಶ್ರೀ ಸೀತಾರಾಮ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಕ್ಷೇತ್ರದ ಗರ್ಭಗುಡಿಯ ಬಾಗಿಲು ತೆರೆದು ವಿಶೇಷ ಪೂಜೆಗಳು ನಡೆಯಿತು.ಬೆಳಗ್ಗೆ ಗಂಟೆ 8ರಿಂದ ಸ್ವಸ್ತಿ ಪುಣ್ಯಾಹವಾಚನೆ, ನವಗ್ರಹ ಹೋಮ, ಚಂಡಿಕಾ ಹೋಮ ನಡೆಯಿತು. ಮಧ್ಯಾಹ್ನ 12ಕ್ಕೆ ಪೂರ್ಣಾಹುತಿಯಾಗಿ ಅನ್ನಸಂತರ್ಪಣೆ ನಡೆಯಿತು. ಸಂಜೆ ರಂಗಪೂಜೆಯೊಂದಿಗೆ ಉತ್ಸವ ಸಂಪನ್ನಗೊಂಡಿತು.
ಕ್ಷೇತ್ರದ ಧರ್ಮದರ್ಶಿ ಡಾ.ರೇಣುಕಾ ಪ್ರಸಾದ್ ಕೆ.ವಿ ಅವರು ಆಗಮಿಸಿದ ಪ್ರತಿಯೊಬ್ಬರನ್ನೂ ಸ್ವಾಗತಿಸಿದರು.
ಡಾ.ಜ್ಯೋತಿ ಆರ್ ಪ್ರಸಾದ್, ಡಾ.ಅಭಿಜ್ಞಾ ಆರ್.ಪ್ರಸಾದ್, ಮೌರ್ಯ ಆರ್.ಪ್ರಸಾದ್, ಎಒಎಲ್ಇ ಕಮಿಟಿ ಬಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ ಮಾಧವ ಬಿ.ಟಿ, ಯಶೋಧ ರಾಮಚಂದ್ರ,ಪ್ರಸನ್ನ ಕಲ್ಲಾಜೆ,ದಿನೇಶ್ ಮಡ್ತಿಲ,ಚಿದಾನಂದ ಬಾಳಿಲ,ಭವಾನಿಶಂಕರ ಅಡ್ತಲೆ,ನಾಗೇಶ್ ಕೊಚ್ಚಿ,ಕಮಲಾಕ್ಷ ನಂಗಾರು, ಧನಂಜಯ ಅಡ್ಪಂಗಾಯ, ಸೂರಯ್ಯ ಸೂಂತೋಡು, ನಾರಾಯಣ ಕೇಕಡ್ಕ,ಸುನಿಲ್ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.