ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಂಜೆ ಭೇಟಿ ನೀಡಿದ್ದಾರೆ.ಭಾನುವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು.ಕುಕ್ಕೆಗೆ ಆಗಮಿಸಿದ ಮಾಜಿ ಪ್ರಧಾನಿಗಳಿಗೆ ಶ್ರೀ ದೇವಳದ ಪರವಾಗಿ ಸ್ವಾಗತ ನೀಡಲಾಯಿತು.ಬಳಿಕ ಅತಿಥಿಗೃಹದಲ್ಲಿ ವಿಶ್ರಾಂತಿ ಪಡೆದ ಅವರು
ರಾತ್ರಿ ಮಹಾಪೂಜೆಯಲ್ಲಿ ಪಾಲ್ಗೊಂಡು ಉತ್ಸವಾದಿಗಳನ್ನು ವೀಕ್ಷಿಸಿದರು. ನಂತರ ಪ್ರಸಾದ ಬೋಜನ ಸ್ವೀಕರಿಸಿದರು. ಸೋಮವಾರ ಆಶ್ಲೇಷ ಬಲಿ ಸೇವೆ ನೆರವೇರಿಸಿದರು.
ಶಾಸಕಿ ಭಾಗೀರಥಿ ಮುರುಳ್ಯ ಅವರು ಮಾಜಿ ಪ್ರಧಾನಿಯವರನ್ನು ಭೇಟಿ ಮಾಡಿದರು.ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವಗೌಡ, ರಾಜ್ಯ ವಕ್ತಾರರದ ಎಂ.ಬಿ. ಸದಾಶಿವ,ಪ್ರಮುಖರಾದ ಎಸ್.ಎನ್.ಮನ್ಮಥ, ಸಂತೋಷ್ ಜಾಕೆ, ಬಾಲಕೃಷ್ಣ ಕೀಲಾಡಿ ಮೊದಲಾದವರು ಉಪಸ್ಥಿತರಿದ್ದರು.









