ಸುಳ್ಯ: ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿರುವ ಹ್ಯಾಕಥಾನ್ ಕಾರ್ಯಕ್ರಮ “ಕೆವಿಜಿಸಿಇ ಹ್ಯಾಕ್ವೈಸ್” ಅನ್ನು ಅಧಿಕೃತವಾಗಿ ಪ್ರಾರಂಭಿಸುವ ನಿಟ್ಟಿನಲ್ಲಿ, ವಿದ್ಯಾರ್ಥಿ ಕ್ಲಬ್ ಸ್ಪಿಯರ್ ಹೈವ್, ಬ್ಯಾನರ್ ಬಿಡುಗಡೆ ಸಮಾರಂಭ ನಡೆಯಿತು. ಕಾರ್ಯಕ್ರಮಕ್ಕೆ ಕಾಲೇಜಿನ
ಪ್ರಾಚಾರ್ಯರಾದ ಡಾ. ಸುರೇಶ ವಿ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಚಂದ್ರಶೇಖರ್ ಎ, ಮಾರ್ಗದರ್ಶಕರಾದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಕಿಶೋರ್ ಕುಮಾರ್ ಅವರ ಮಾರ್ಗದರ್ಶನ ಮತ್ತು ಪ್ರೋತ್ಸಾಹಕ್ಕೆ ಧನ್ಯವಾದಗಳನ್ನು ಸಲ್ಲಿಸಲಾಯಿತು. ವಿವಿಧ ವಿಭಾಗದ ಪ್ರಾಧ್ಯಾಪಕರು, ಬೋಧಕ ವರ್ಗದ ಸದಸ್ಯರು ಮತ್ತು ವಿದ್ಯಾರ್ಥಿಗಳ ಉಪಸ್ಥಿತರಿದ್ದರು.