ಸುಳ್ಯ:ಹಳೆಗೇಟು ಸಾಂಸ್ಕೃತಿಕ ಸಂಘದ ವತಿಯಿಂದ 41ನೇ ವರ್ಷದ ಗಣೇಶೋತ್ಸವ ಸೆ.7ರಿಂದ 9ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ಹಳೆಗೇಟು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಿ ಶ್ರೀನಿವಾಸ್ ರಾವ್ ಉದ್ಘಾಟಿಸಿದರು. ಸಂಘದ
ಉಪಾಧ್ಯಕ್ಷ ಬಾಲಗೋಪಾಲ ಸೇರ್ಕಜೆ, ಕಾರ್ಯದರ್ಶಿ ಶಿವನಾಥ್ ರಾವ್ ಹಳೆಗೇಟು,ಉಪ ಕಾರ್ಯದರ್ಶಿ ರಾಕೇಶ್ ಕುಂಟಿಕಾನ, ಕೋಶಾಧಿಕಾರಿ ಚಿತ್ತರಂಜನ್, ಕಾರ್ಯಕ್ರಮದ ಸಂಚಾಲಕರಾದ ದಿವಾಕರ ತಿಮ್ಸನ್ ಉಪಸ್ಥಿತರಿದ್ದರು.
ನಗರ ಪಂಚಾಯತ್ ಉಪಾಧ್ಯಕ್ಷ ಜಿ.ಬುದ್ಧ ನಾಯ್ಕ್, ವಿಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು. ಬಳಿಕ
ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸವಿತಾ ಕಿರಣ ಇವರ ಸಾರಥ್ಯದಲ್ಲಿ ನೃತ್ಯ ವೈವಿಧ್ಯ ಕಾರ್ಯಕ್ರಮ ಹಾಗೂ ಬೆಟ್ಟಂಪಾಡಿ ಕಲಾವಿದರಿಂದ ಚಿಣ್ಣರ ಕಲರವ, ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಸಂಭ್ರಮ ನಡೆಯಿತು.