ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಹಾಗೂ ಕೆ.ವಿ.ಜಿ. ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಹಾಫ್ ಮ್ಯಾರಥಾನ್ ಶನಿವಾರ ಬೆಳಿಗ್ಗೆ ಉತ್ಸಾಹ ಚಿಮ್ಮಿಸಿತು.ಸುಳ್ಯ ನೆಹರೂ ಸ್ಮಾರಕ ಮಹಾವಿದ್ಯಾಲಯದ ಸುವರ್ಣ ಸಂಭ್ರಮ ಪ್ರಯುಕ್ತ ರಾಷ್ಟ್ರ ಮಟ್ಟದ ಹಾಫ್ ಮ್ಯಾರಥಾನ್ ಹಮ್ಮಿಕೊಳ್ಳಲಾಯಿತು. ಕೆವಿಜಿ ಕ್ರೀಡಾಂಗಣದಿಂದ ಆರಂಭಗೊಂಡ
ಹಾಫ್ ಮ್ಯಾರಥಾನ್ ಕ್ರಮವಾಗಿ 21 ಕಿಲೋ ಮೀಟರ್, 10,5,3 ಕಿ.ಮಿ. ಹೀಗೆ ಪುರುಷರಿ ಹಾಗೂ ಮಹಿಳೆಯರಿಗೆ ವಿವಿಧ ವಿಭಾಗಗಳಲ್ಲಿ ಮ್ಯಾರಥಾನ್ ನಡೆಯಿತು. ಮಹಿಳೆ ಮತ್ತು ಪುರುಷ ವಿಭಾಗದಲ್ಲಿ ಪ್ರತ್ಯೇಕವಾಗಿ 18ಕ್ಕೆ ಒಳಪಟ್ಟ ವಿಭಾಗ ಮತ್ತು 18-35 ವಯೋಮಾನ,36-50 ಮತ್ತು 50 ಕ್ಕಿಂತ ಹೆಚ್ಚಿನ ವಯೋಮಾನದಲ್ಲಿ ನಡೆಯಿತು. ಮ್ಯಾರಥಾನ್ನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಚಿದಾನಂದ ಕೆ.ವಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ

ಉಪಾಧ್ಯಕ್ಷೆ ಶೋಭಾ ಚಿದಾನಂದ , ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ, ಕಾರ್ಯದರ್ಶಿ ಡಾ.ಐಶ್ವರ್ಯ ಕೆ.ಸಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸಮರೋಪ ಸಮಾರಂಭದಲ್ಲಿ ಹಾಫ್ ಮ್ಯಾರಥಾನ್ನಲ್ಲಿ ವಿಜೇತರಾದವರಿಗೆ ನಗದು ಸಹಿತ ಪದಕ ಮತ್ತು ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಪ್ರಶಸ್ತಿ ಪ್ರಧಾನ ಸಂಧರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಎಸ್ ಭೂಮರೆಡ್ಡಿ ,ಪುತ್ತೂರು ಡಿವೈಎಸ್ ಪಿ ಪ್ರಮೋದ್ ಕುಮಾರ್ , ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹ ಮಂಡಳಿ ಅಧ್ಯಕ್ಷ ಟಿ.ಎಂ ಶಾಹೀದ್ ತೆಕ್ಕಿಲ್, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಂ ಮುಸ್ತಫ ಮತ್ತಿತರರು ಉಪಸ್ಥಿತರಿದ್ದರು.
ಮ್ಯಾರಥಾನ್ನಲ್ಲಿ ವಿಶೇಷ ವೇಷ ಭೂಷಣಗಳನ್ನು ತೊಟ್ಟು ಗಮ್ಮತ್ ರನ್ನಲ್ಲಿ ಭಾಗವಹಿಸಿದರು.












