ಸುಳ್ಯ: ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿಎ.9 ರಿಂದ ಎ.12 ವರೆಗೆ ನಡೆಯಲಿರುವ ಬ್ರಹ್ಮಕಲಶದ ಅಂಗವಾಗಿ ಅಯೋಧ್ಯೆಯಿಂದ ಹೊರಟಿರುವ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಯು ಬುಧವಾರ ಸುಳ್ಯ ತಾಲೂಕನ್ನು ಪ್ರವೇಶಿಸಿತು.ಬೆಳಗ್ಗೆ ತಾಲೂಕಿನ
ನೆಟ್ಟಾರು, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ, ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯ, ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಾಲಯ, ಜಾಲ್ಸೂರು ಶ್ರೀ ಗುರುರಾಘವೇಂದ್ರ ಭಜನ ಮಂದಿರ ಮೊದಲಾದೆಡೆ ಸಂಚರಿಸಿ ಪುತ್ತೂರು ತಾಲೂಕಿನ ಪೆರ್ಲಂಪಾಡಿಗೆ ತೆರಳಿತು.ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಮುಖ್ಯದ್ವಾರದಿಂದ ದೇವಸ್ಥಾನದ ಮುಂಭಾಗದ ತನಕ ಬ್ಯಾಂಡ್ ವಾದ್ಯ ಹಾಗೂ ಪೂರ್ಣಕುಂಭ ಸ್ವಾಗತದೊಂದಿಗೆ ರಥವನ್ನುಸ್ವಾಗತಿಸಲಾಯಿತು.
ದೇವಸ್ಥಾನದ ಮುಂಭಾಗದಲ್ಲಿ ರಥಕ್ಕೆ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.
ಬ್ರಹ್ಮಕಲಶ ಸಮಿತಿ ಉಪಾಧ್ಯಕ್ಷ ಸೀತಾರಾಮ ರೈ ಕೆದಂಬಾಡಿ ಮಾತನಾಡಿ ಜ್ಯೋತಿ ರಥಯಾತ್ರೆ ಹಾಗು ಬ್ರಹ್ಮಕಲಶ ಯಶಸ್ವಿಯಾಗಿ ನಡೆಯಲು ಎಲ್ಲರು ಸಹಕರಿಸಬೇಕೆಂದು ಹೇಳಿದರು. ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುನಿಲ್ ಕುಮಾರ್ ರೈ ಪೆರುವಾಜೆಗುತ್ತು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶ ಸಮಿತಿ ಉಪಾಧ್ಯಕ್ಷ ಎಸ್.ಎನ್. ಮನ್ಮಥ, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ,
ಪದ್ಮನಾಭ ಬೀಡು, ಪ್ರೀತಂ ರೈ ಪೆರುವಾಜೆ, ನಾರಾಯಣ ಕೊಂಡೆಪ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.










