ಹನುಮಗಿರಿ:ಹನುಮಗಿರಿಯ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ರವಿವಾರ ಬೆಳಗ್ಗೆ ಏಕಕಾಲದಲ್ಲಿ ಶ್ರೀ ಕೋದಂಡರಾಮ ಹಾಗೂ ಹನುಮರಿಗೆ ಪುನ: ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ನಡೆಯಿತು.ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಹಾಗೂ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ಆಚಾರ್ಯತ್ವದಲ್ಲಿ ಯತಿಶ್ರೇಷ್ಠರಾದ
ಕಾಂಚಿ ಕಾಮಕೋಟಿ ಪೀಠಾಧಿಪತಿ ಜಗದ್ಗುರು ಶಂಕರಾಚಾರ್ಯ ಶ್ರೀ ಶಂಕರ ವಿಜೇಯೇಂದ್ರ ಸರಸ್ವತಿ ಸ್ವಾಮೀಜಿ, ಶ್ರೀ ಸಂಸ್ಥಾನ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ಉಪಸ್ಥಿತರಿದ್ದರು. ಬೆಳಗ್ಗೆ ೮.೨೦ ರಿಂದ ೧೦.೨೦ ರ ವೃಷಭ ಲಗ್ನ ಸುಮುಹೂರ್ತದಲ್ಲಿ ಕೋಡಂಡರಾಮ ಹಾಗೂ ಪಂಚಮುಖಿ ಆಂಜನೇಯ ದೇವರ ಪುನರ್ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ನಡೆಯಿತು.ಬೆಳಿಗ್ಗೆ ಗಣಪತಿ ಹೋಮ, ಪ್ರತಿಷ್ಠಾಪಾಣಿ, ಬೆಳಗ್ಗೆ ೮.೨೦ ರಿಂದ ೧೦.೨೦ರ ವೃಷಭ ಲಗ್ನ ಸುಮುಹೂರ್ತದಲ್ಲಿ ಕೋದಂಡರಾಮ ಮತ್ತು

ಪಂಚಮುಖಿ ಆಂಜನೇಯ ದೇವರ ಪ್ರತಿಷ್ಠೆ, ಪರಿವಾರ ದೇವರ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಪ್ರತಿಷ್ಠಾಬಲಿ, ಮಹಾಪೂಜೆ, ಮಹಾ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಿತು. ಸಂಜೆ ರಿಂದ ಶ್ರೀ ಕೋದಂಡರಾಮ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, ಶ್ರೀ ದೇವರ ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯೊಂದಿಗೆ ೪ ದಿನಗಳ ಬ್ರಹ್ಮಕಲಶ ಉತ್ಸವ ಸಂಪನ್ನಗೊಂಡಿತು.
ಇದೇ ಸಂದರ್ಭದಲ್ಲಿ ಕಂಚಿ ಕಾಮಕೋಟಿ ಪೀಠಾಧಿಪತಿ ಜಗದ್ಗುರು ಪರಮಪೂಜ್ಯ ಶ್ರೀ ಶಂಕರ ವಿಜೇಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಶ್ರೀ ಸಂಸ್ಥಾನ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಧಾರ್ಮಿಕ ಸಂದೇಶ ನೀಡಿದರು.

ಪಂದಳ ರಾಜಮನೆತನದ ಮಹಾರಾಜ ಹಾಗೂ ಕೇರಳ ರಾಜ್ಯ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜದ ಅಧ್ಯಕ್ಷರಾಗಿರುವ ಪುಣರ್ತಂ ತಿರುನಾಳ್ ನಾರಾಯಣ ವರ್ಮ, ಆರೆಸ್ಸೆಸ್ ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಧರ್ಮಶ್ರೀ ಪ್ರತಿಷ್ಠಾನದ ಮಹಾಪೋಷಕರಾದ ಜಿ.ಕೆ. ಮಹಾಬಲೇಶ್ವರ ಭಟ್, ಕೆ.ಎಂ. ನಟರಾಜ್, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಶ್ಯಾಂ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸ್ವಾಗತ ಸಮಿತಿ ಅಧ್ಯಕ್ಷ ಡಾ. ರವೀಶ್ ಪಡುಮಲೆ, ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ, ವಿವಿಧ ಸಮಿತಿಗಳ ಪದಾಧಿಕಾರಿಗಳು, ಸಾವಿರಾರು ಭಕ್ತರು ಪಾಲ್ಗೊಂಡರು. ಬ್ರಹ್ಮಕಲಶಾಭಿಷೇಕದ ದಿನ ಮಧ್ಯಾಹ್ನ ಸಾವಿರಾರು ಮಂದಿ ಅನ್ನಪ್ರಸಾದ ಸ್ವೀಕರಿಸಿದರು.














