ಹರಿಹರ: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸಂಘ ಪರಿವಾರ ಸಂಘಟನೆಗಳ ನೇತೃತ್ವದಲ್ಲಿ ಹರಿಹರ ಪಳ್ಳತ್ತಡ್ಕ, ಐನೆಕಿದು, ಬಾಳುಗೋಡು, ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮದ ಗ್ರಾಮಸ್ಥರಿಂದ ಹರಿಹರ ಪಳ್ಳತ್ತಡ್ಕದಲ್ಲಿ ಎ.30 ರಂದು ಪಂಜಿನ ಮೆರವಣಿಗೆ ಹಾಗೂ ಶ್ರದ್ಧಾಂಜಲಿ ಸಭೆ ನಡೆಯಿತು.ಶ್ರೀ ಹರಿಹರೇಶ್ವರ ದೇವಸ್ಥಾನದಿಂದ ಹೊರಟು ಹರಿಹರ ಪೇಟೆಯವರೆಗೆ ಪಂಜಿನ ಮೆರವಣಿಗೆ ಮೂಲಕ
ಬಂದು ಹರಿಹರ ಮುಖ್ಯ ಪೇಟೆಯಲ್ಲಿ ಸೇರಿ ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಯಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಬಿಜೆಪಿ ಸುಳ್ಯ ನಗರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ.ಎ.ಟಿ ಮಾತನಾಡಿ ‘ ಸರ್ಜಿಕಲ್ ಸ್ಟ್ರೈಕ್ ಸೇರಿದಂತೆ ಈ ಹಿಂದೆಯೇ ಉಗ್ರವಾದಿಗಳನ್ನು ಮಟ್ಟ ಹಾಕಲು ಭಾರತ ಹಲವು ಕ್ರಮಗಳನ್ನು

ಮಾಡಿತ್ತು. ಇದೀಗ ಇನ್ನಷ್ಟು ಕ್ರಮ ಕೈಗೊಳ್ಳಲು ಸೇನೆಗೆ ಅಧಿಕಾರ ನೀಡಿದೆ.ಉಗ್ರವಾದವನ್ನು ಬುಡಸಮೇತ ಕಿತ್ತುಹಾಕುವ ತನಕ ನಮ್ಮ ದೇಶ ಹಾಗೂ ನಮ್ಮ ಸೇನೆ ವಿರಾಮಿಸುವುದಿಲ್ಲ ಎಂದರು. ಉಪನ್ಯಾಸಕ ಪದ್ಮಕುಮಾರ್ ಗುಂಡಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಡಾ.ಸೋಮಶೇಖರ ಕಟ್ಟೆಮನೆ, ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ ಮತ್ತಿತರ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.