ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ಜು 3ರಂದು ಭೇಟಿ ಮಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ
ಪ್ರಥಮ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಹರೀಶ್ ಇಂಜಾಡಿ ಅವರು ರಾಜ್ಯದ ಪ್ರಸಿದ್ದ ಕ್ಷೇತ್ರ ಆಗಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುವಂತೆ ಮನವಿ ಮಾಡಿದರು. ದೇವಸ್ಥಾನದಲ್ಲಿ ನಡೆಯುವ ಮಾಸ್ಟರ್ ಪ್ಲಾನ್ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವಂತೆ ಮನವಿ ಮಾಡಲಾಯಿತು. ಕಾಯರ್ತೋಡಿ ಶ್ರೀ ಮಹಾವಿಷ್ಣು
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಬೆಂಗಳೂರಿನ ನಾಗಭೂಷಣ್ ಗುರೂಜೀ ಮತ್ತಿತರರು ಈ ಸಂದರ್ಭದಲ್ಲಿದ್ದರು.