ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಹಾಜರಾಗಿದ್ದ ಹರೀಶ್ ಪೂಂಜ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ
ಶಾಸಕರಾದ ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಷನ್ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ವಿಚಾರಣೆಗಾಗಿ ಠಾಣೆಗೆ ಕರೆತರಲು ಪೊಲೀಸರು ಶಾಸಕರ ಮನೆಗೆ ತೆರಳಿದ್ದರು. ದಿನಪೂರ್ತಿ ನಡೆದ ಹೈಡ್ರಾಮಾದ ಬಳಿಕ ಬಳಿಕ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟೀಸ್ ನೀಡಿದ್ದರು. ಬಳಿಕ ರಾತ್ರಿಯ ವೇಳೆಗೆ ಠಾಣೆಗೆ ಪೂಂಜಾ ಠಾಣೆಗೆ ಹಾಜರಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ.