ಮುಂಬೈ:ವಿಶ್ವಕಪ್ ಆರಂಭಕ್ಕೆ ಒಂದು ದಿನ ಮಾತ್ರ ಬಾಕಿ ಉಳಿದಿದ್ದು, ಭಾರತ ತಂಡದ ವೇಗಿ ಹರ್ಷಿತ್ ರಾಣಾ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಬದಲಿಗೆ ಇನ್ನೋರ್ವ ವೇಗಿ ಮೊಹಮ್ಮದ್ ಸಿರಾಜ್ ಅವರಿಗೆ ಅವಕಾಶ ನೀಡಲಾಗಿದೆ.ಬುಧವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ
ಅಭ್ಯಾಸ ಪಂದ್ಯದ ಸಂದರ್ಭದಲ್ಲಿ ಮೊಣಕಾಲಿನ ಗಾಯಕ್ಕೆ ಒಳಗಾಗಿ ತಂಡದಿಂದ ಹೊರಬಿದ್ದಿರುವ ಹರ್ಷಿತ್ ರಾಣಾ ಬದಲು ಮೊಹಮ್ಮದ್ ಸಿರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿವೆ.ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ನಾಯಕ ಸೂರ್ಯಕುಮಾರ್ ಯಾದವ್, ‘ಹರ್ಷಿತ್ ರಾಣಾ ಅವರು ಸಂಪೂರ್ಣವಾಗಿ ಫಿಟ್ ಆಗಿಲ್ಲ. ಅವರು, ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಆದರೆ, ಅವರನ್ನು ತಂಡದಿಂದ ಸಂಪೂರ್ಣವಾಗಿ ಹೊರಗಿಟ್ಟಿಲ್ಲ’ ಎಂದು ತಿಳಿಸಿದ್ದರು.
ಹರ್ಷಿತ್ ರಾಣಾಗೂ ಮೊದಲು, ಟಿ20 ವಿಶ್ವಕಪ್ಗೆ ಆಯ್ಕೆ ಮಾಡಲಾಗಿದ್ದ ಭಾರತ ತಂಡದಿಂದ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಗಾಯದಿಂದ ಹೊರಗುಳಿದಿದ್ದಾರೆ.







