ನವದೆಹಲಿ:ಹರಿಯಾಣ ವಿಧಾನಸಭೆಯ ಎಲ್ಲಾ 90 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು ಆಡಳಿತರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಿದೆ. ಈ ಮೂಲಕ ಗೆಲುವಿನ ಹ್ಯಾಟ್ರಿಕ್ ಸಾಧಿಸಿದೆ.ಸ್ಪಷ್ಟ ಬಹುಮತಕ್ಕೆ 46 ಸ್ಥಾನಗಳ ಅಗತ್ಯ ಇತ್ತು. ಈ ಪೈಕಿ ಬಿಜೆಪಿ 48 ಸ್ಥಾನಗಳನ್ನು ಗೆದ್ದು ಸರಳ ಬಹುಮತ ಪಡೆಯಿತು. ಕಾಂಗ್ರೆಸ್ 37, ಐಎನ್ಎಲ್ಡಿ 2, ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳನ್ನು
ಗೆದ್ದು ಕೊಂಡಿದ್ದಾರೆ. ಕಾಂಗ್ರೆಸ್ ವಿರೋಧ ಪಕ್ಷವಾಗಿ ಹೊರ ಹೊಮ್ಮಿದೆ. ಸಿಎಂ ನಯಾಬ್ ಸಿಂಗ್ ಸೈನಿ ಅವರೇ ಮತ್ತೆ ಮುಖ್ಯಮಂತ್ರಿಯಾಗಿ ಮುಂದುವರಿಯುವ ಸಾಧ್ಯತೆ ಇದೆ. ಆಡಳಿತರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 90 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 49 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಮೈಕೂತ್ರಿಕೂಟ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಇದರಲ್ಲಿ ಎನ್ಸಿ 42 ಹಾಗೂ ಕಾಂಗ್ರೆಸ್ 6 ಹಾಗೂ ಮಿತ್ರ ಪಕ್ಷ ಸಿಪಿಎಂ 1 ಕ್ಷೇತ್ರಗಳಲ್ಲಿ ಗೆದ್ದು ಮ್ಯಾಜಿಕ್ ನಂಬರ್ 46 ಅನ್ನು ದಾಟಿದೆ. ಈ ಮೂಲಕ ಸರ್ಕಾರ ರಚನೆಗೆ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಕ್ಕಂತಾಗಿದೆ. ಬಿಜೆಪಿ 29 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮೆಹಮೂಬಾ ಮುಫ್ತಿ ಅವರ ಪಿಡಿಪಿ ಪಕ್ಷ 3 ಕ್ಷೇತ್ರಗಳಲ್ಲಿ ಗೆದ್ದಿದೆ.
ಬುಡಗಾಮ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎನ್ಸಿ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ನ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಣೆ ಮಾಡಿದ್ದಾರೆ.
ಬುಡಗಾಮ್ ಮಾತ್ರವಲ್ಲ ಗಂಡೇರ್ಬಲ್ ಕ್ಷೇತ್ರದಲ್ಲೂ ಒಮರ್ ಗೆಲುವಿನ ನಗೆ ಬೀರಿದ್ದಾರೆ.