ಸುಳ್ಯ:ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ 54ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ ಸೆ.29 ರಿಂದ ಆರಂಭಗೊಂಡಿದೆ. ಇದರ ಅಂಗವಾಗಿ ಹಸಿರುವಾಣಿ ಮೆರವಣಿಗೆ ನಡೆಯಿತು. ಶ್ರೀರಾಂ ಪೇಟೆಯ ಶ್ರೀರಾಮ ಭಜನಾ ಮಂದಿರದಲ್ಲಿ
ಪ್ರಾರ್ಥನೆ ಸಲ್ಲಿಸಿ ಆರಂಭಗೊಂಡ ಹಸಿರುವಾಣಿ ಮೆರವಣಿಗೆ
ಚೆನ್ನಕೇಶವದ ದೇವಸ್ಥಾನದ ಮುಂಭಾಗದ ಶಾರದಾಂಬಾ ಕಲಾ ವೇದಿಕೆಯ ತನಕ ಆಕರ್ಷಕ ಕುಣಿತ ಭಜನೆಯೊಂದಿಗೆ ನಡೆಯಿತು. ಭಜನಾ ತಂಡಗಳಿಂದ ಕುಣಿತ ಭಜನೆಯೊಂದಿಗೆ ಸಾಗಿದ ಮೆರವಣಿಗೆಯಲ್ಲಿ ಚೆಂಡೆ, ವಾದ್ಯ ಮೇಳಗಳು ಮೆರುಗು ನೀಡಿದವು.
ಈ ಸಂದರ್ಭದಲ್ಲಿ ಶಾರದಾಂಬಾ, ದಸರಾ ಸಮೂಹ ಸಂಸ್ಥೆಗಳ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ,ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ದಾಸ್, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಖಜಾಂಜಿ ಬೂಡು ರಾಧಾಕೃಷ್ಣ ರೈ, ಶ್ರೀ ಶಾರದಾಂಬ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್,ದಸರಾ ಉತ್ಸವ ಸಮಿತಿಯ ಖಜಾಂಜಿ ಸುನಿಲ್ ಕೇರ್ಪಳ,ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ನ
ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್, ಕಾರ್ಯದರ್ಶಿ ಎಂ.ಕೆ. ಸತೀಶ್, ಗೌರವ ಸದಸ್ಯ ರವಿಚಂದ್ರ ಕೊಡಿಯಾಲಬೈಲು,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ, ಸಮೂಹ ಸಮಿತಿಗಳ ಪದಾಧಿಕಾರಿಗಳಾದ ನವೀನ್ ಎಲಿಮಲೆ, ಪ್ರಕಾಶ್ ಯಾದವ್, ವರ್ಷಿತ್ ಚೊಕ್ಕಾಡಿ, ಅಶೋಕ್ ಅಡ್ಕಾರ್ ಮತ್ತಿತರರು ಈ ಸಂದರ್ಭಗಳಲ್ಲಿ ಉಪಸ್ಥಿತರಿದ್ದರು.





