ಸುಳ್ಯ:ಆಧುನಿಕ ಜೀವನ ಪದ್ಧತಿ, ಆಹಾರ ಪದ್ಧತಿ ಮತ್ತು ಪರಿಸರ ಕೂಡ ಆರೋಗ್ಯಕ್ಕೆ ಪೂರಕವಾಗಿಲ್ಲ. ಈ ನಿಟ್ಟಿನಲ್ಲಿ ಆರೋಗ್ಯದ ಬಗ್ಗೆ ಎಲ್ಲರೂ ಜಾಗೃತರಾಗಿರಬೇಕು ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಪ್ರಧಾನ ಕಾರ್ಯದರ್ಶಿ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಹೇಳಿದರು ಅವರು ಕೆ.ವಿ.ಜಿ ಸುಳ್ಯ ಹಬ್ಬ ಸೇವಾ ಸಂಘ ಕೆ.ವಿ.ಜಿ ದಂತ ಮಹಾವಿದ್ಯಾಲಯ , ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಎಲಿಮಲೆಯಲ್ಲಿ ನಡೆದ ಉಚಿತ
ಆರೋಗ್ಯ ತಪಾಸಣೆ ಮತ್ತು ಮಾಹಿತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡುತ್ತಿದ್ದರು.ಬದುಕಿನಲ್ಲಿ ಪ್ರತಿಯೊಬ್ಬರು ವಿಶ್ರಾಂತಿ ಇಲ್ಲದೆ ದುಡಿಯುತ್ತಿರುವುದು, ಒತ್ತಡದ ಜೀವನ ಪದ್ಧತಿ ನಮ್ಮ ಆರೋಗ್ಯಕ್ಕೆ ಮಾರಕವಾಗಿದೆ. ಆದುದರಿಂದ ಹಂತ ಹಂತವಾಗಿ ನಾವೆಲ್ಲರೂ ಸೂಕ್ತ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಸಲಹೆ ಮತ್ತು ಮಾರ್ಗದರ್ಶನ ಪಡೆದು ಕೊಳ್ಳುವುದು ಅತಿ ಅಗತ್ಯ ಎಂದರು. ವೇದಿಕೆಯಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಲೋಚನಾ ದೇವ, ನೆಲ್ಲೂರು ಕೆಮ್ರಾಜೆ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ, ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಮೋಹನರಾಮ ಸುಳ್ಳಿ,ಕೆ.ವಿ.ಜಿ.ಆಯುರ್ವೇದ ಕಾಲೇಜ್ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ್, ನೆಲ್ಲೂರು ಕೆಮ್ರಾಜೆ ಸೊಸೈಟಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಗುತ್ತಿಗಾರು ಸೊಸೈಟಿ ಉಪಾಧ್ಯಕ್ಷ ಕಿಶೋರ್ ಅಂಬೆಕಲ್ಲು ಮತ್ತಿತರರು ಅತಿಥಿಗಳಾಗಿ ಭಾಗವಹಿಸಿದ್ದರು. ಕೆ.ವಿ.ಜಿ.ಯ ವೈದ್ಯರಾದ ಡಾ.ರಂಗನಾಥ್ ಹಾಗೂ ಡಾ.ಹೇಮಂತ್ ವೇದಿಕೆಯಲ್ಲಿದ್ದು ಆರೋಗ್ಯ ಮಾಹಿತಿ ನೀಡಿದರು. ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ದೊಡ್ಡಣ್ಣ ಬರೆಮೇಲು ಅಧ್ಯಕ್ಷತೆ ವಹಿಸಿದ್ದರು. ಕೆ.ವಿ.ಜಿ.ಸುಳ್ಯ ಹಬ್ಬ ಸಮಿತಿ ಪೂರ್ವಾಧ್ಯಕ್ಷರಾದ ಎನ್.ಎ.ರಾಮಚಂದ್ರ ಹಾಗೂ ಪಿ.ಸಿ.ಜಯರಾಮ, ವೇದಿಕೆಯಲ್ಲಿ ಉಪಸ್ಥಿತರಿದ್ದರು.