ಮಂಗಳೂರು: ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಅ.15ರ ಶನಿವಾರ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ, ಅ.18ರ ಮಂಗಳವಾರ ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹಾಗೂ ಅ.19ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಶಿಬಿರ ನಡೆಯಲಿದೆ.ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post