ಸುಳ್ಯ:ಕಳೆದ ಕೆಲವು ದಿನಗಳಿಂದ ಉಷ್ಣಾಂಶ ತೀವ್ರ ಏರಿಕೆಯಾಗಿದೆ. ಇದರಿಂದ ಹಗಲಿನ ವೇಳೆ ಸೆಕೆ ಅಧಿಕವಾಗಿದೆ. ಒಣ ಹವೆಯ ವಾತಾವರಣ ಕಂಡು ಬಂದಿದೆ. ಸುಳ್ಯ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಇದರಿಂದ ಸೆಕೆಯೂ ಅಧಿಕವಾಗಿದೆ. ಮಧ್ಯಾಹ್ನದ ವೆಳೆಗೆ ಕೆಲವು ದಿನ 35 ಡಿಗ್ರಿ ಸೆಲ್ಸಿಯಸ್ಗಿಂತಲೂ ಅಧಿಕ ಉಷ್ಣಾಂಶ
ದಾಖಲಾಗುತಿದೆ.ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಸೇರಿ ಕರಾವಳಿ ಭಾಗಗಳಲ್ಲಿ ತಾಪಮಾನ ಹೆಚ್ಚಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್, ಬಾಗಲಕೋಟೆ, ವಿಜಯಪುರ, ಕಲಬುರಗಿ ಹಾಗೂ ಬೆಳಗಾವಿ, ರಾಯಚೂರು, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿಯಲ್ಲಿ ಉಷ್ಣಾಂಶ ಹೆಚ್ಚಾಗಲಿದ್ದು ಬಿಸಿಲಿನ ತಾಪ ಏರಲಿದೆ.ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ದಕ್ಷಿಣ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿರುತ್ತದೆ ಎಂದು ಇಲಾಖೆ ಸೂಚನೆ ನೀಡಿದೆ.









