ಮಂಗಳೂರು:ಭಾರತಿಯ ಹವಾಮಾನ ಇಲಾಖೆಯ ವರದಿ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ಯನ್ನು ನೀಡಲಾಗಿದೆ. ಪ್ರಸ್ತುತ ಬೆಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ 40 ಡಿಗ್ರಿ ಸೆಲ್ಸಿಯಸ್ಗಿಂತ ಅಧಿಕ ಉಷ್ಣಾಂಶ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗಲಿದ್ದು ಹೀಟ್ ವೇವ್ ಸ್ಟೋಕ್ (ಶಾಖದ ಅಲೆ) ನಿಂದಾಗಿ ಜನರ ಆರೋಗ್ಯದ ಮೇಲೆ
ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮಗಳ ಕುರಿತು ಸಲಹೆಗಳನ್ನು ನೀಡಿದೆ.
ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ಗಂಟೆ ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ,ಟೋಪಿ, ಬೂಟುಗಳು ಅಥವಾ ಚಪ್ಪಲ್ ಗಳನ್ನು ಬಳಸಿ.ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ.
ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ.ಹಳೆಯ ಆಹಾರ ಮತ್ತು ಹೆಚ್ಚಿನ ಪ್ರೋಟೀನ್ ಹೊಂದಿರುವ ಆಹಾರವನ್ನು ತಪ್ಪಿಸಿ.ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ.ಮೂರ್ಚೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ. ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಎಳನೀರು, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ದೇಹವನ್ನು ಮರು- ಜಲೀಕರಣ ಮಾಡಲು ಸಹಾಯ ಮಾಡುತ್ತದೆ.ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.
ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್ಗಗಳು ಅಥವಾ ಸನ್ಶೇಡ್ ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ
ರೈತರು/ಕೃಷಿ ಕಾರ್ಮಿಕರು ಹೊಲದಲ್ಲಿ ಕೆಲಸ ಮಾಡುವಾಗ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.ಪ್ರಯಾಣಿಸುವಾಗ, ನೀರನ್ನು ತೆಗೆದುಕೊಂಡು ಹೋಗಿರಿ.
ವ್ಯಕ್ತಿಗೆ ಸನ್ಸ್ಟೋಕ್ ಅದರೆ ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ ನೆರಳಿನ ಕಳಗೆ ಇರಿಸಿ. ಅವರನ್ನು ಒದ್ದೆ ಬಟ್ಟೆಯಿಂದ ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು. ವ್ಯಕ್ತಿಗೆ ORS, ನಿಂಬೆ ಶರಬತ್ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಿ.ವ್ಯಕ್ತಿಯನ್ನು ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಸೂಕ್ತ ಚಿಕಿತ್ಸೆ ಕೊಡಿಸಬೇಕಾಗುತ್ತದೆ.
ಸಾಕಷ್ಟು ನೀರು, ಮಜ್ಜಿಗೆ ಕುಡಿಯಿರಿ ವಾಸವಿರುವ ಕೋಣೆಯನ್ನು ತಂಪಾಗಿರಿಸಿ ಇತ್ಯಾದಿ ಸಲಹೆ ಸೂಚನೆಗಳನ್ನು ನೀಡಲಾಗಿದೆ.