ಮಂಗಳೂರು: ಕರ್ನಾಟಕದಲ್ಲಿ ಹವಾಮಾನ ಭಾರೀ ಬದಲಾವಣೆಗಳು ಆಗುತ್ತಿವೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಶಾಖದ ಅಲೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು
ನಾಳೆ ಬಿಸಿ ಮತ್ತು ಆರ್ದ್ರ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಇರುವುರಿಂದ ಹಾವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ಕಳೆದ 15 ದಿನಗಳಿಂದ ಬಿಸಿಲು ಹೆಚ್ಚಳವಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಇದೀಗ ಕರ್ನಾಟಕದ ವಿವಿಧ ಭಾಗದಲ್ಲಿ ಶಾಖದ ಅಲೆಯ ಎಚ್ಚರಿಕೆ ಹವಾಮಾನ ಇಲಾಖೆ ನೀಡಿದೆ.