ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ದಿನಗಳಲ್ಲಿ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದೆ. ಮೇ.2ರ ತನಕ ಬಿಸಿ ಗಾಳಿ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2-3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ
ಬಿಸಿಯ ವಾತಾವರಣ ಇರಲಿದೆ ಎಂದು ಮುನ್ಸೂಚನೆ ಇದೆ.
ಆರೆಂಜ್ ಅಲರ್ಟ್:
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಾದ್ಯಂತ ಮುಂದಿನ ಒಂದು ವಾರ ಒಣಹವೆ ಇರುವ ಸಂಭವವಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ. ಮೇ 2ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ ಎಂದು ಇಲಾಖೆ ಹೇಳಿದೆ. ವಿವಿಧ ಜಿಲ್ಲೆಗಳಲ್ಲಿ ಸುಡು ಬಿಸಿಲು, ಉಷ್ಣಾಂಶ ಏರಿಕೆಯಾಗಿದೆ.