ಬೆಂಗಳೂರು: ರಾಜ್ಯದಲ್ಲಿ ಬಿಸಿ ಗಾಳಿ ತೀವ್ರ ಹೆಚ್ಚಳ ಆಗಿದ್ದು , 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕೊಟ್ಟಿದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಜನರು
ಇಲಾಖೆ ಸೂಚಿಸಿದೆ. ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು, ಯಾದಗಿರಿ, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ದೀರ್ಘಾವಧಿ ವರೆಗೆ ಸೂರ್ಯ ನಿಗೆ ಒಡ್ಡಿಕೊಳ್ಳುವ ಅಥವಾ ಕಷ್ಟಕರವಾದ ಕೆಲಸ ಮಾಡುವವರಲ್ಲಿ ಹೆಚ್ಚಿನ ತಾಪಮಾನ, ಶಾಖದ ಕಾಯಿಲೆಯ ಲಕ್ಷಣಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಹೇಳಲಾಗಿದೆ.ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವ್ರ ಬಿಸಿಗಾಳಿ ಸ್ಥಿತಿ ಏರ್ಪಡಲಿದೆ.
ಬೇಸಗೆಯಲ್ಲಿ ದಾಖಲಾಗುವ ಸಾಮಾನ್ಯ ತಾಪಮಾನದಲ್ಲಿ ಮಿತಿಗಿಂತ ಭಾರೀ ಹೆಚ್ಚಿನ ಪ್ರಮಾಣದಲ್ಲಿ ಉಷ್ಣಾಂಶ ದಾಖಲಾದರೆ, ಅಂತಹ ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಲಾಗುತ್ತದೆ. ಆಯಾ ಪ್ರದೇಶಗಳ ಹವಾಮಾನಕ್ಕೆ ಅನುಗುಣವಾಗಿ ಇಲಾಖೆಯು ರೆಡ್ ಅಲರ್ಟ್ ಘೋಷಿಸುತ್ತದೆ. ಇಂತಹ ಪ್ರದೇಶಗಳಲ್ಲಿ ಜನ
ಎಚ್ಚರಿಕೆ ವಹಿಸುವಂತೆ ಸೂಚಿಸಲಾಗುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ಗಿಂತ ಅಧಿಕ ಉಷ್ಣಾಂಶ ದಾಖಲಾಗಿದೆ.ಕೆಲವು ಕಡೆ 45 ಡಿಗ್ರಿ ಸೆಲ್ಷಿಯಸ್ ತನಕ ಏರಿಕೆಯಾಗಿದೆ