ಬೆಂಗಳೂರು:ಉರಿ ಬಿಸಿಲ ಝಳ, ಉಷ್ಣಾಂಶ ಹೆಚ್ಚಾಗಿದ್ದು. ವಿವಿಧ ಭಾಗಗಳಲ್ಲಿ ಭೂಮಿ ಬೆಂದು ಬರಡಾಗಿದೆ.ಈ ಮಧ್ಯೆ ರಾಜ್ಯದ ವಿವಿಧೆಡೆ ಮುಂದಿನ ದಿನಗಳಲ್ಲಿ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು
ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ರಾಜ್ಯದಾದ್ಯಂತ ಮುಂದಿನ ಒಂದು ವಾರ ಒಣಹವೆ ಇರುವ ಸಂಭವವಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ. ಮೇ 2ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ ಎಂದು ಇಲಾಖೆ ಹೇಳಿದೆ. ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯಾಗಿದೆ.