ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅ.16ರಂದು ಉತ್ತಮ ಮಳೆಯಾಗಿದೆ.ಸುಳ್ಯ,ಬೆಳ್ತಂಗಡಿ, ಉಳ್ಳಾಲ, ಮಂಗಳೂರಿನ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಗುಡುಗು, ಸಿಡಿಲಿನ ಅಬ್ಬರದೊಂದಿಗೆ ಮಳೆಯಾಗಿದೆ. ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ವಾಯುಭಾರ
ಕುಸಿತದ ಪರಿಣಾಮ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಹಗಲಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿದಿದೆ. ಹಲವು ಕಡೆಗಳಲ್ಲಿ ತುಂತುರು ಮಳೆಯಾಗಿದೆ.
ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ, ಪುತ್ತೂರು, ಬೆಳ್ತಂಗಡಿ, ಸುಬ್ರಹ್ಮಣ್ಯ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಕೆಲವಡೆ ಮಳೆಯೊಂದಿಗೆ ಗಾಳಿಯ ತೀವ್ರತೆ ಜೋರಾಗಿರುವುದು ಕಂಡು ಬಂದಿದೆ. ಚಂಡಮಾರುತದ ಪರಿಣಾಮ ಕರಾವಳಿಯಲ್ಲಿ ಅ.16ರಿಂದ 18ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ಮಳೆ ಇನ್ನಷ್ಟು ಬಿರುಸುಗೊಳ್ಳುವ ಸಾಧ್ಯತೆಯಿದೆ ಎಂದು ಸೂಚನೆಯಿದೆ.