ಮಂಗಳೂರು:ಕರ್ನಾಟಕದ ಕರಾವಳಿಯಲ್ಲಿ ವರುಣನ ಅಬ್ಬರ ಹೆಚ್ಚಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಜುಲೈ 24ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ
ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ಧಾರಾಕಾರ ಮಳೆ ಸುರಿಯಿತು.ಗುರುವಾರವೂ ಮಳೆಯ ಅಬ್ಬರ ಮುಂದುವರಿದಿದೆ. ಜಿಲ್ಲೆಯ ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ, ಬಂಟ್ವಾಳ ತಾಲೂಕಿನಲ್ಲಿ ಅಂಗನವಾಡಿ, ಶಾಲೆಗಳು, ಪದವಿಪೂರ್ವ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲೂ ಬಿರುಸಿನ ಮಳೆ ಮುಂದಿಮುವರಿದಿದೆ
ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ಜುಲೈ 18ರಂದು ಜಿಲ್ಲಾಡಳಿತ ರಜೆ ಘೋಷಿಸಿದೆ. ಜಿಲ್ಲೆಯ ಎಲ್ಲ ನದಿಗಳು, ತೊರೆಗಳು ತುಂಬಿ ಹರಿಯುತ್ತಿವೆ. ಕೆಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಮಡಿಕೇರಿ– ಮಂಗಳೂರು ರಸ್ತೆಯಲ್ಲಿ ಜೋಡುಪಾಲದ ಬಳಿ ಮಣ್ಣು ಕುಸಿದಿದೆ.ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಭಾಗಮಂಡಲ– ನಾಪೋಕ್ಲು ರಸ್ತೆಯಲ್ಲಿ ನೀರು ಹರಿಯುತ್ತಿದೆ.