ಸುಳ್ಯ:ದಕ್ಷಿಣಕನ್ನಡ, ಉಡುಪಿ, ಕೊಡಗು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ ಜೋರಾಗಿದೆ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಮುಂದುವರೆದಿದ್ದು ಜು.19ರ ತನಕ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ
ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 3-4 ದಿನಗಳಿಂದ ಕರಾವಳಿಯಲ್ಲಿ ಭಾರಿ ಮಳೆ ಮುಂದುವರೆದಿದ್ದು, ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ, ಸಾಕಷ್ಟು ಕಡೆ ಭೂ ಕುಸಿತ ಸಂಭವಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಹಾಸನ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ಮಳೆ ವಿಪರೀತವಾಗಲಿದೆ.
ಸೋಮವಾರ ಮತ್ತು ಮಂಗಳವಾರ ನಿರಂತರ ಸುರಿದ ಮಳೆಯಿಂದಾಗಿ ಮಳೆನಾಡಿನ ನದಿಗಳು ಉಕ್ಕಿ ಪಯಸ್ವಿನಿ, ಕುಮಾರಧಾರಾ, ನೇತ್ರಾವತಿ ನದಿಗಳು ತುಂಬಿ ಹರಿಯುತಿದೆ.
ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.