ಸುಳ್ಯ: ಸುಳ್ಯದಲ್ಲಿ ಅ.17ರಂದು ಉತ್ತಮ ಮಳೆಯಾಗಿದೆ. ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಉತ್ತಮ ಮಳೆ ಸುರಿದಿದೆ. 3 ಗಂಟೆಯ ಬಳಿಕ ವಿವಿಧ ಭಾಗಗಳಲ್ಲಿ ಸಾಮಾನ್ಯ ಮಳೆ ಆರಂಭ ಅಗಿತ್ತು. 3.30 ರಿಂದ 4.30ರ ತನಕ ಸುಮಾರು
ಒಂದು ಗಂಟೆಗೂ ಹೆಚ್ಚು ಸಮಯದಿಂದ ಭರ್ಜರಿ ಮಳೆಯಾಗಿದೆ. ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತಿದೆ. ಎರಡು ದಿನದಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತಿದೆ. ಸುಳ್ಯದಲ್ಲಿ ಬೆಳಗ್ಗಿನಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಭಾರೀ ಮಳೆಯಾಗಿದೆ. ತಾಲೂಕಿನ ಕೆಲವು ಕಡೆ ತುಂತುರು ಮಳೆಯಾಗಿದೆ. ಇನ್ನು ಕೆಲವು ಕಡೆ ಉತ್ತಮ ಮಳೆಯಾಗಿದೆ. ಭಾರೀ ಮಳೆಗೆ ಚರಂಡಿ ವ್ಯವಸ್ಥೆ ಸರಿ ಇಲ್ಲದ ಕಾರಣ ಮಳೆಯ ನೀರು ರಸ್ತೆಯಲ್ಲಿಯೇ ಹರಿದಿದೆ. ಕೆಲವಡೆ ನೀರು ಅಂಗಡಿಗಳಿಗೂ ನುಗ್ಗಿದೆ.
ಚಂಡಮಾರುತದ ಪರಿಣಾಮ ಕರಾವಳಿಯಲ್ಲಿ ಅ.16ರಿಂದ 18ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ಮಳೆ ಇನ್ನಷ್ಟು ಬಿರುಸುಗೊಳ್ಳುವ ಸಾಧ್ಯತೆಯಿದೆ ಎಂದು ಸೂಚನೆಯಿದೆ.