ಸುಳ್ಯ:ಸತತ ಎರಡನೇ ದಿನವೂ ಸುಳ್ಯದಲ್ಲಿ ಭಾರೀ ಮಳೆ ಸುರಿದಿದೆ. ಶುಕ್ರವಾರ ಸಂಜೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಭರ್ಜರಿ ಮಳೆ ಸುರಿಯಿತು. ಗುಡುಗು ಮಿಂಚಿನ ಅಬ್ಬರದೊಂದಿಗೆ ಭಾರೀ ಮಳೆಯಾಗಿದೆ. ಸಂಜೆ 6 ಗಂಟೆಯ ವೇಳೆಗೆ ಆರಂಭವಾದ ಮಳೆ ಹಾಗೂ
ಗುಡುಗು, ಸಿಡಿಲಿನ ಅಬ್ಬರದೊಂದಿಗೆ 7.30ರ ವರೆಗೆ ಮುಂದುವರಿಯಿತು. ಮಳೆಗಾಲ ನೆನಪಿಸುವಂತೆ ಕುಂಭ ದ್ರೋಣ ಮಳೆ ಸುರಿಯಿತು. ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಕಳೆದ ಕೆಲವು ದಿನಗಳಿಂದ ಸುಳ್ಯ ತಾಲೂಕಿನಲ್ಲಿ ಉತ್ತಮ ಮಳೆಯಾಗುತಿದೆ. ಕರಾವಳಿ ಜಿಲ್ಲೆಗಳು ಸೇದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ. ಹಿಂಗಾರು ಮಳೆ ಮುಂದುವರಿಯುವ ಸಾಧ್ಯತೆ ಇದ್ದು ರಾಜ್ಯದ ವಿವಿಧ ಭಾಗಗಳಲ್ಲಿ ನ.8ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.









