ಸುಳ್ಯ: ಸುಳ್ಯ ನಗರ ಪಂಚಾಯತ್ ಮುಂಭಾಗದ ಶೆಡ್ನಲ್ಲಿ ಹೆಬ್ಬಾವು ಸೇರಿಕೊಂಡಿರುವ ಘಟನೆ ನಡೆದಿದೆ. ನಗರ ಪಂಚಾಯತ್ ಮುಂಭಾಗದಲ್ಲಿ ತಿಂಗಳಿನಿಂದ ತುಂಬಿಡಲಾಗಿರುವ ಕಸವನ್ನು ಸಾಗಾಟ ಮಾಡಲು ಕಸವನ್ನು ತೆರವು ಮಾಡುವ ಸಂದರ್ಭದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಂಡು ಬಂದಿದೆ. ಇದರಿಂದ ಕಾರ್ಮಿಕರು ಗಾಬರಿಗೊಂಡರು. ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಯಿತು. ಸುಳ್ಯ ಅರಣ್ಯ ಇಲಾಖೆಯವರು ಆಗಮಿಸಿ ಹೆಬ್ಬಾವನ್ನು ಸೆರೆ ಹಿಡಿದು ಕಾಡಿಗೆ ಬಿಡಲಾಯಿತು ಎಂದು ತಿಳಿಸಲಾಯಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.












