ಸುಳ್ಯ:ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಲಭ್ಯತೆಗೆ ಸಮಸ್ಯೆ ಎದುರಾಗಿದ್ದು ಇದರಿಂದ ಕೆಲಸವಿಲ್ಲದೆ ಕಟ್ಟಡ ನಿರ್ಮಾಣ ಕಾರ್ಮಿಕರು ಸಂಕಷ್ಟಕ್ಕೀಡಾಗಿರುತ್ತಾರೆ. ಆದುದರಿಂದ ಸಂಕಷ್ಟಕ್ಕೆ ಈಡಾದ ಕಟ್ಟಡ ಕಾರ್ಮಿಕರಿಗೆ ತುರ್ತಾಗಿ ನೆರವು ಒದಗಿಸಬೇಕು ಎಂದು
ಕರ್ನಾಟಕ ಸರಕಾರದ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಜಾನಿ ಕೆ.ಪಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅಲ್ಲದೆ ಅತಿಯಾದ ಮಳೆಯ ಕಾರಣದಿಂದಲೂ ಕೆಲಸ ಮಾಡಲು ಕಷ್ಟಪಡುತ್ತಿರುವ
ಕಾರ್ಮಿಕರಿಗೆ ಅಗತ್ಯ ನೆರವು ನೀಡಬೇಕು, ಕೆಂಪು ಕಲ್ಲು ಲಭ್ಯತೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಬಗ್ಗೆ ಪೂರಕವಾಗಿ ಸ್ಪಂದಿಸಿದ ಸಚಿವರು ಕೂಡಲೇ ಸಂಬಂಧಪಟ್ಟ ಸಚಿವರುಗಳಲ್ಲಿ ಮತ್ತು ಅಧಿಕಾರಿಗಳಲ್ಲಿ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಕೆ.ಪಿ.ಜಾನಿ ತಿಳಿಸಿದ್ದಾರೆ.