ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ಅವರು ಗುರುವಾರ(ನ28) ಪ್ರಮಾಣ ವಚನ ಸ್ವೀಕಾರ ಮಾಡಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭ ರಾಂಚಿಯ ಮೊರಾಬಾಡಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ
ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಪ್ರಮಾಣ ವಚನ ಬೋಧಿಸಿದರು.ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಇಂಡಿಯಾ ಒಕ್ಕೂಟದ ಹಲವು ನಾಯಕರು ಭಾಗಿಯಾಗಿದ್ದರು.ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಬಿಹಾರದ ವಿಪಕ್ಷ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಇತರರು ಭಾಗಿಯಾಗಿದ್ದರು.