ಬೆಳ್ಳಾರೆ: ಬೆಳ್ಳಾರೆ ಹಿದಾಯ ಪಬ್ಲಿಕ್ ಸ್ಕೂಲ್, ವಿದ್ಯಾಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಸುನೈನಾ ಬಿ.ಮಾತನಾಡಿ
ಯೋಗ ಅಭ್ಯಾಸದಿಂದ ಆರೋಗ್ಯಕರ ದೇಹ ಮತ್ತು ಮನಸ್ಸನ್ನು ನೀಡಬಲ್ಲದು ಎಂದು ಹೇಳಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಹೇಮಲತಾ ಇವರು ವಿದ್ಯಾರ್ಥಿಗಳಿಗೆ ಯೋಗಾಸ ಅಭ್ಯಾಸ ಮಾಡಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿಯರು ಶಾಲಾ ಮಕ್ಕಳು ಯೋಗಾಬ್ಯಾಸದಲ್ಲಿ ಪಾಲ್ಗೊಂಡರು
previous post