ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ರಾಜ್ಯದಲ್ಲಿ ಕಳೆದ 36 ಗಂಟೆಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಧಾರಾಕಾರ ಮಳೆಯಿಂದಾಗಿ ಭಾರೀ ಆಸ್ತಿ-ಪಾಸ್ತಿ ನಷ್ಟವಾಗಿದೆ. ಹಲವೆಡೆ ಭೂಕುಸಿತ ಸಂಭವಿಸಿದೆ. ಹಲವು ಮನೆಗಳು, ಕಟ್ಟಡಗಳಯ ಕುಸಿದು
ಬಿದ್ದಿದೆ.ಭಾರೀ ಮಳೆಯಿಂದಾಗಿ ಪರಿಸ್ಥಿತಿ ಹದಗೆಡುತ್ತಿದೆ. ಶಿಮ್ಲಾ ಮತ್ತಿತರ ಕಡೆ ಕಟ್ಟಡ ಮನೆಗಳು ಕಟ್ಟಡಗಳು ನೆಲಸಮವಾಗಿವೆ. ಕಟ್ಟಡಗಳು ಕುಸಿಯುವ ವೀಡಿಯೋ ವೈರಲ್ ಆಗಿದೆ.
ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ. ಭೂಕುಸಿತ, ಪ್ರವಾಹ ಪರಿಸ್ಥಿತಿಯಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಮಂಡಿ– ಕುಲ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಿಲುಕಿದ್ದು ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದೆ.