ಸುಳ್ಯ: ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಸೆ.15ರಂದು ಹಿಂದಿ ದಿವಸನ್ನು ಆಚರಿಸಲಾಯಿತು.ವಿದ್ಯಾರ್ಥಿಗಳಲ್ಲಿ ಹಿಂದಿ ಭಾಷೆ ಮತ್ತು ಸಾಹಿತ್ಯದ ಕುರಿತು ಆಸಕ್ತಿ ಮೂಡಿಸುವ ಹಾಗೂ ಭಾಷಾ ಜ್ಞಾನವನ್ನು ವೃದ್ಧಿಸುವ ಉದ್ದೇಶದಿಂದ ವಿವಿಧ ಚಟುವಟಿಕೆಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದ ಅಂಗವಾಗಿ
ಹಿಂದಿ ನುಡಿಗಟ್ಟುಗಳು ಹಿಂದಿಯಿಂದ ಇಂಗ್ಲಿಷ್ಗೆ ಹಾಗೂ ಇಂಗ್ಲಿಷ್ನಿಂದ ಹಿಂದಿಗೆ ಅನುವಾದ ಮತ್ತು ಹಿಂದಿ ಸಾಹಿತ್ಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರ ಸ್ಪರ್ಧೆಗಳನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.ಹಿಂದಿ ಭಾಷೆಯ ಮಹತ್ವ, ಅದರ ಸಾಹಿತ್ಯಿಕ ಶ್ರೀಮಂತಿಕೆ ಹಾಗೂ ದೈನಂದಿನ ಬದುಕಿನಲ್ಲಿ ಭಾಷಾ ಕೌಶಲ್ಯದ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ವಿವಿಧ ಸ್ಪರ್ಧೆಗಳ ಮೂಲಕ ಹಿಂದಿ ಭಾಷೆಯನ್ನು ಕಲಿಯುವುದರ ಜೊತೆಗೆ ಅದನ್ನು
ಆಸಕ್ತಿದಾಯಕವಾಗಿ ಬಳಸುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲಾಯಿತು.ಕಾರ್ಯಕ್ರಮವನ್ನು ಹಿಂದಿ ಭಾಷಾ ವಿದ್ಯಾರ್ಥಿಗಳು ಹಾಗೂ ಹಿಂದಿ ಉಪನ್ಯಾಸಕಿ ಸುಸ್ಮಿತಾ ಜಾಕೆ ಅವರ ಮಾರ್ಗದರ್ಶನದಲ್ಲಿ ನಡೆಸಿಕೊಡಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











