ಸುಳ್ಯ: ಸುಳ್ಯದಲ್ಲಿ ಕಾಂಗ್ರೆಸ್ ಸೋತಿರುವುದಕ್ಕೆ ನೋವಿದೆ. ಈ ಬಾರಿ ಸುಳ್ಯದಲ್ಲಿ ಗೆಲುವಿನ ನಿರೀಕ್ಷೆ ಇತ್ತು. ಮುಂದೆಯೂ ಎಲ್ಲರನ್ನೂ ಒಟ್ಟಾಗಿ ಸೇರಿಸಿ ಸುಳ್ಯದಲ್ಲಿ ಪಕ್ಷವನ್ನು ಗಟ್ಟಿಯಾಗಿ ಬೆಳೆಸುತ್ತೇವೆ ಎಂದು ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿರುವುದು ಖುಷಿ ಕೊಟ್ಟಿದೆ. ಸರಕಾರದ ಜನಪರ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವುದರ ಜೊತೆಗೆ ಸುಳ್ಯದ ಜನರ ಸೇವೆ ಮಾಡಲು ಹಾಗೂ ಸುಳ್ಯದ ಅಭಿವೃದ್ಧಿಗೂ ನಿರಂತರ ಪ್ರಯತ್ನ ಮುಂದುವರಿಸುತ್ತೇವೆ ಎಂದು ನಂದಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.