ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗೀ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜು(12ನೇ ತರಗತಿವರೆಗೆ) ಜೂ.28 ರಂದು(ಶುಕ್ರವಾರ) ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶದಲ್ಲಿ ತಿಳಿಸಿದ್ದಾರೆ.